ದಿನಾಂಕ: 07-04-2026ರಂದು ತುಮಕೂರು ಜಿಲ್ಲೆಯ ಎಲ್ಲಾ 11 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಉದ್ದೇಶದಿಂದ ಜಿಲ್ಲಾಮಟ್ಟದ ಸಮಿತಿ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ, ಈಗಾಗಲೇ ತಾಲ್ಲೂಕುಮಟ್ಟದ ಅರ್ಜಿ ಪರಿಶೀಲನಾ ಸಮಿತಿ ಸಭೆಯಲ್ಲಿ ಪರಿಶೀಲಿಸಲಾದ ಆಕ್ಷೇಪಣೆಗಳನ್ನು ಮರುಪರಿಶೀಲಿಸಲಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು, ತುಮಕೂರು ಅವರು 11 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಸ್ವೀಕರಿಸಲಾದ ಎಲ್ಲಾ ಆಕ್ಷೇಪಣೆಗಳನ್ನು ಸ್ವತಃ ಖುದ್ದಾಗಿ ಪರಿಶೀಲಿಸಲು ನಿರ್ದೇಶನ ನೀಡಲಾಯಿತು.



