ದಿನಾಂಕ: 30-01-2026ರಂದು ಶಿರಾ ತಾಲೂಕು ಭುವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾನಂಗಿ ಗ್ರಾಮಕ್ಕೆ ಭೇಟಿ ನೀಡಿ ಸದರಿ ಭೇಟಿ ಸಮಯದಲ್ಲಿ ಪ್ರಸ್ತುತ ಮಾನಂಗಿ ಗ್ರಾಮದ ಕುಡಿಯುವ ನೀರು ಸರಬರಾಜು ಕೊಳವೆ ಬಾವಿ ವಿಫಲವಾಗಿದ್ದು, ಖಾಸಗಿ ಕೊಳವೆಬಾವಿ ಮೂಲಕ ನೀರು ಸರಬರಾಜು ಮಾಡುತ್ತಿರುವುದಾಗಿ ಗ್ರಾಮಸ್ಥರು ಮಾಹಿತಿ ನೀಡಿದರು. ಆದ್ದರಿಂದ ಸ್ಥಳದಲ್ಲಿ ಹಾಜರಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ತುರ್ತಾಗಿ ಕುಡಿಯುವ ನೀರು ಸರಬರಾಜು ಮಾಡಲು ಸೂಕ್ತಕ್ರಮವಹಿಸುವಂತೆ ಸೂಚಿಸಿದರು ಹಾಗೂ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಗ್ರಾಮ ನೈರ್ಮಲ್ಯ ಕುಡಿಯವ ನೀರು ಕುರಿತು ಚರ್ಚಿಸಲಾಯಿತು.ಗ್ರಾಮದ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ನೀಡುತ್ತಿರುವ ಬೆಳಗಿನ ಸಾಯಿ ಶೂರ್ ಮಾಲ್ಟನ್ನು ತಾವು ಖುದ್ದು ಕುಡಿದು ಗುಣಮಟ್ಟ ಪರಿಶೀಲಿಸಿದರು ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಕುಡಿಯುವ ನೀರಿನ ಘಟಕ ಮಂಜೂರು ಮಾಡಲು ಮನವಿ ಮಾಡಿದರು ಹಾಗೂ ಆಹಾರ ಇಲಾಖೆಯಿಂದ ತಮ್ಮ ಗ್ರಾಮದಲ್ಲಿರುವ ಆಹಾರ ವಿತರಣೆಗೆ ಅನುಕೂಲ ಮಾಡಿಕೊಡಲು ಕೋರಿದರು.ಈ ಸಂದರ್ಭದಲ್ಲಿ ಮಾನ್ಯ ಉಪ ವಿಭಾಗಾಧಿಕಾರಿ, ಮಧುಗಿರಿ ವಿಭಾಗ ತಹಶೀಲ್ದಾರ್, ಶಿರಾ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರುಗಳು ಹಾಜರಿದ್ದರು.




